ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂಬ ಚರ್ಚೆಗಳ ನಡುವೆಯೇ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ (PM Modi meets President) ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ಅಧಿಕೃತ ವಿವರಗಳು ಹೊರಬೀಳದಿದ್ದರೂ, ರಾಷ್ಟ್ರಪತಿ ಭವನವು ಎಕ್ಸ್ ಖಾತೆಯಲ್ಲಿ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದೆ.