_1785657901020.webp?w=480&auto=format%2Ccompress&fit=max)
_1785657901020.webp?w=480&auto=format%2Ccompress&fit=max)
ಪ್ರಧಾನಿ ನರೇಂದ್ರ ಮೋದಿ ಅವರ ಟೀಕಾಕಾರರನ್ನು ವ್ಯಂಗ್ಯ ಮಾಡಿರುವ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ (Shehzad Poonawalla), ಪ್ರಧಾನಿ ಮೋದಿ ಸರ್ವಾಧಿಕಾರಿಯಾಗಲು ವಿಫಲರಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ.
ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ನೀಟ್ ಪ್ರತಿಭಟನೆಯ ವೇಳೆ ತಮ್ಮ ಮತ್ತು ತಮ್ಮ ದಿವಂಗತ ತಾಯಿಯ ವಿರುದ್ಧ ಅಸಭ್ಯ ಪದಗಳನ್ನು ಬಳಸಿದ ವಿದ್ಯಾರ್ಥಿಗಳನ್ನು ಕ್ಷಮಿಸುವಂತೆ ಪ್ರಧಾನಿ ಮೋದಿ ವೀಡಿಯೊ ಸಂದೇಶದ ಮೂಲಕ ಮನವಿ ಮಾಡಿದ ಮರುದಿನವೇ ಈ ಹೇಳಿಕೆ ಬಂದಿದೆ. ಸರ್ವಾಧಿಕಾರಿಯಂತೆ ವರ್ತಿಸುವ ಬದಲಿಗೆ ಪ್ರಧಾನಿ ಮೋದಿ ಅವರು ಸಮಾಜ, ಪೊಲೀಸ್ ಮತ್ತು ಪ್ರತಿಯೊಬ್ಬರ ಬಳಿ ಆ ವಿದ್ಯಾರ್ಥಿಗಳನ್ನು ಕ್ಷಮಿಸುವಂತೆ ಮನವಿ ಮಾಡಿದ್ದಾರೆ ಎಂದು ಪೂನಾವಾಲಾ ಹೇಳಿದ್ದಾರೆ.