ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಜೊತೆ ಪ್ರಧಾನಿ ಮೋದಿ ಕರೆ ಮೂಲಕ ಮಾತುಕತೆ; ಇರಾನ್ ಮೇಲಿನ ದಾಳಿಗೆ ಖಂಡನೆ | PM Modi
ಪ್ರಧಾನಿ ಮೋದಿ ಮತ್ತು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್
Published on:
Copied
Follow Us
ನವದೆಹಲಿ: ಇರಾನ್ ವಿರುದ್ಧ ಇಸ್ರೇಲ್-ಅಮೆರಿಕಾ ಯುದ್ಧದ ನಡೆಯುತ್ತಿರುವ ವೇಳೆ ಶನಿವಾರ(ಮಾ. 20) ಪ್ರಧಾನಿ ಮೋದಿ, ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ನೌರುಜ್ ಶುಭಾಶಯ ತಿಳಿಸಿ, ಇದೇ ವೇಳೆ ಅಲ್ಲಿನ ದಾಳಿ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ನಲ್ಲಿ ಪೋಸ್ಟ್ ಹಾಕಿರುವ ಅವರು, ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿದೆ. ಈದ್ ಮತ್ತು ನೌರುಜ್ ಶುಭಾಶಯಗಳನ್ನು ತಿಳಿಸಿದೆ. ಈ ಹಬ್ಬದ ಋತುವು ಪಶ್ಚಿಮ ಏಷ್ಯಾಕ್ಕೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ನಾವು ಆಶಿಸಿದ್ದೇವೆ.
ಪ್ರಾದೇಶಿಕ ಸ್ಥಿರತೆಗೆ ಬೆದರಿಕೆ ಹಾಕುವ ಮತ್ತು ಜಾಗತಿಕ ಪೂರೈಕೆ ಸರಪಳಿಗಳನ್ನು ಅಡ್ಡಿಪಡಿಸುವ ಈ ಪ್ರದೇಶದ ನಿರ್ಣಾಯಕ ಮೂಲಸೌಕರ್ಯಗಳ ಮೇಲಿನ ದಾಳಿಗಳನ್ನು ಖಂಡಿಸುತ್ತೇವೆ ಎಂದು ಹೇಳಿದ್ದು, ಇರಾನ್ನಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಭದ್ರತೆಗೆ ಇರಾನ್ನ ನಿರಂತರ ಬೆಂಬಲವನ್ನು ನೀಡಿದೆ ಎಂದು ಶ್ಲಾಘಿಸಿದ್ದಾರೆ.
ಫೆ. 28ರಿಂದ ಶುರುವಾದ ಸಂಘರ್ಷದ ಬಳಿಕ ಪ್ರಧಾನಿ ಮೋದಿ ಇರಾನ್ ಅಧ್ಯಕ್ಷರ ಜೊತೆ ನಡೆಸಿದ ಎರಡನೇ ಮಾತುಕತೆ ಇದಾಗಿದೆ. ಮಾರ್ಚ್ 12ರಂದು ಮೊದಲ ಬಾರಿಗೆ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದರು.
ಕಳೆದ ಮೂರು ವಾರಗಳಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಜಾಗತಿಕ ತೈಲ ಮತ್ತು ಅನಿಲ ಬಿಕ್ಕಟ್ಟನ್ನು ಉಂಟುಮಾಡಿದೆ. ಇರಾನ್ ಹಾರ್ಮುಜ್ ಜಲಸಂಧಿಯನ್ನು ನಿರ್ಬಂಧಿಸಿರುವುದು ಇತರೆ ರಾಷ್ಟ್ರಗಳನ್ನು ದೊಡ್ಡ ಸಂಕಷ್ಟಕ್ಕೆ ದೂಡಿದೆ. ಕಳೆದ ಎರಡ್ಮೂರು ದಿನಗಳಿಂದ ಪ್ರಧಾನಿ ಪಶ್ಚಿಮ ಏಷ್ಯಾದ ಇತರೆ ದೇಶಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸುತ್ತಿದ್ದ ಸಂಘರ್ಷವನ್ನು ಅಂತ್ಯಗೊಳಿಸಲು ಸಹಕರಿಸುವಂತೆ ಭಾಗಿಯಾಗುವಂತೆ ಕೋರುತ್ತಿದ್ದಾರೆ ಎನ್ನಲಾಗಿದೆ (ಏಜೆನ್ಸೀಸ್).