ಬೇಸಿಗೆ ಹಂಗಾಮಿನಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶ, ಕೆರೆ ಅಚ್ಚುಕಟ್ಟು ಪ್ರದೇಶ ಮತ್ತು ಬಯಲುಸೀಮೆಯಲ್ಲಿ ಅಂತರ್ಜಲ ಆಧಾರಿತ ಬೋರ್‌ವೆಲ್ ನೀರಾವರಿ ಪ್ರದೇಶಗಳಲ್ಲಿ ಏಕದಳ ಧಾನ್ಯ ಸೇರಿ ವಿವಿಧ ಬಗೆಯ ತರಕಾರಿ ಬೆಳೆ ಬೆಳೆಯುತ್ತಾರೆ. ಹಾಸನ, ತುಮಕೂರು, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂ. ಗ್ರಾಮಾಂತರ ಜಿಲ್ಲೆಗಳ ರೈತರು, ಆಲೂಗಡ್ಡೆ, ಟೊಮೆಟೊ, ಬೀನ್ಸ್, ಕ್ಯಾರೆಟ್, ಬೀಟ್‌ರೂಟ್, ಎಲೆಕೋಸು, ಹೂಕೋಸು, ಬದನೆಕಾಯಿ, ಬೆಂಡೆಕಾಯಿ, ಹಿರೇಕಾಯಿ, ಸೌತೆಕಾಯಿ, ತೊಂಡೆಕಾಯಿ ಬೆಳೆ ಬೆಳೆಯುತ್ತಾರೆ.