ತೆಲಂಗಾಣದ ವಿಕಾರಾಬಾದ್ನಲ್ಲಿ ನಡೆದ ಡಿಸಿಸಿ ಅಧ್ಯಕ್ಷರ ತರಬೇತಿ ಕಾರ್ಯಕ್ರಮದಲ್ಲಿ ಸಿಎಂ ರೇವಂತ್ ರೆಡ್ಡಿ, ರಾಷ್ಟ್ರದ ಹಿತದೃಷ್ಟಿಯಿಂದ ಪ್ರಧಾನಿ ಹುದ್ದೆಯನ್ನು ವಹಿಸಿಕೊಳ್ಳಲು ರಾಹುಲ್ ಗಾಂಧಿಯವರು ಸಿದ್ದರಾಗಬೇಕು. ಪ್ರಧಾನಿ ಹುದ್ದೆಯು ಒಂದು ಆಭರಣವಲ್ಲ, ಬದಲಾಗಿ ಈ ದೇಶದ ಜನರಿಗೆ ಸೇವೆ ಸಲ್ಲಿಸುವ ಜವಾಬ್ದಾರಿಯಾಗಿದೆ. ಆ ಜವಾಬ್ದಾರಿಯನ್ನು ಹೊರಲು ತಮ್ಮ ಸಿದ್ಧತೆಯನ್ನು ವ್ಯಕ್ತಪಡಿಸಬೇಕು. ಇದು ಪ್ರತಿ ಕಾಂಗ್ರೆಸ್ ಕಾರ್ಯಕರ್ತನ ಬಯಕೆ, ಅದಕ್ಕೆ ಎಲ್ಲರೂ ಶ್ರಮಿಸಬೇಕು ಎಂದಿದ್ದರು.