ಕಳೆದ ವಾರ ಕೋಟಾದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದ ರಾಹುಲ್ ಗಾಂಧಿ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಪರೀಕ್ಷಾ ವ್ಯವಸ್ಥೆಯು ದುರುಪಯೋಗಗೊಂಡಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕು ಮತ್ತು ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕಾಂಗ್ರೆಸ್ನ ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿರುವ ಧರ್ಮೇಂದ್ರ ಪ್ರಧಾನ್, ಎಲ್ಲೆಲ್ಲಿ ಲೋಪದೋಷಗಳು ವರದಿಯಾಗಿದೆಯೋ ಅಲ್ಲೆಲ್ಲಾ ಸರ್ಕಾರ ತಕ್ಷಣದ ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಆದರೆ ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿವೆ ಎಂದು ತಿರುಗೇಟು ನೀಡಿದ್ದಾರೆ(ಏಜೆನ್ಸೀಸ್).