ದೇಶದ ರೈತರಿಗೆ ಗೌರವ ನೀಡಲು ರೈತಪೀಠ ಪ್ರಶಸ್ತಿ ಸ್ಥಾಪನೆ-honour

ರೈತಪೀಠ ಪ್ರಶಸ್ತಿ
ರೈತಪೀಠ ಪ್ರಶಸ್ತಿ
Published on
ಬೆಂಗಳೂರು: ದೇಶದ ರೈತರಿಗೆ ಗೌರವ ಮತ್ತು ಕೃಷಿ ಕೆಲಸಕ್ಕೆ ಪ್ರೋತ್ಸಾಹ ದೊರೆಯಬೇಕು ಎಂಬ ಉದ್ದೇಶದಿಂದ ದಕ್ಷಿಣ ಕನ್ನಡದ ರೈತ ಉದ್ಯಮಿಯಾದ ಎಸ್‌ಕೆಎಫ್‌ ಎಲಿಕ್ಸರ್‌ ಸಂಸ್ಥೆಯ ಮುಖ್ಯಸ್ಥ ಡಾ.ರಾಮಕೃಷ್ಣ ಆಚಾರ್, ಒಂದು ಲಕ್ಷ ರೂಪಾಯಿ ಮೊತ್ತದ ವಿನೂತನ ರೈತಪೀಠ ಪ್ರಶಸ್ತಿ ಸ್ಥಾಪಿಸಿದ್ದಾರೆ.
ಪ್ರತೀ ವರ್ಷವೂ ರೈತರನ್ನು ಪುರಸ್ಕರಿಸಿ ಗೌರವಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಪ್ರಶಸ್ತಿಗೆ 200ಕ್ಕೂ ಹೆಚ್ಚು ಅಪರೂಪದ ಭತ್ತದ ತಳಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಿರುವ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲೂಕಿನವರಾದ ರೈತ ಬಿ.ಕೆ. ದೇವರಾಯ ಮಿತ್ತಬಾಗಿಲು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಬಹಳಷ್ಟು ಕಡೆಗಳಲ್ಲಿ ಭತ್ತದ ಕೃಷಿ ಕ್ಷೀಣಿಸುತ್ತಿದ್ದರೂ 80ರ ಹರೆಯದ ಬಿ.ಕೆ ದೇವರಾಯ 200ಕ್ಕೂ ಅಧಿಕ ಭತ್ತದ ತಳಿಗಳನ್ನು ಉಳಿಸಿ ಬೆಳೆಸುತ್ತಾ ಬಂದಿದ್ದಾರೆ. 'ಕಾಲದ ಹೊಡೆತಕ್ಕೆ ಮರೆಯಾಗಿ ಹೋಗಬಹುದಾಗಿದ್ದ ಅಪರೂಪದ ತಳಿಗಳನ್ನು ಮುಂದಿನ ಪೀಳಿಗೆಗೆ ಉಳಿಸಿರುವುದಲ್ಲದೇ, ಕೃಷಿಯಲ್ಲಿ ಇತರರಿಗೂ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ. ದೇವರಾಯರಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಮೂಡಬಿದ್ರಿ ಸಮೀಪದಲ್ಲಿರುವ ಎಸ್‌ಕೆಎಫ್‌ ಎಲಿಕ್ಸರ್ ಸಂಸ್ಥೆಯ ಮುಖ್ಯಸ್ಥರಾಗಿ, ಉದ್ಯಮಿಯಾಗಿ ಸಾಕಷ್ಟು ಕೆಲಸ ಮಾಡಿರುವ ಡಾ. ರಾಮಕೃಷ್ಣ ಆಚಾರ್ ಇದೀಗ ಕೃಷಿಗೆ, ರೈತರಿಗೆ ಪ್ರೋತ್ಸಾಹ ನೀಡಲು ಮುಂದಾಗಿರುವುದು ಮಾದರಿ ನಡೆಯಾಗಿದೆ. ಮುಂದಿನ ಪೀಳಿಗೆ ಕೃಷಿಯತ್ತ ಆಕರ್ಷಿತರಾಗುವಂತೆ ಮಾಡುವ, ಮಣ್ಣಿನ ಸಂರಕ್ಷಣೆ ಮಾಡುವ, ಕೃಷಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಡಾ. ರಾಮಕೃಷ್ಣ ಆಚಾರ್ ಅವರ ನಿಲುವು ಅತ್ಯಂತ ಮಹತ್ವದ್ದಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net