ಸದರಿ ಕಚೇರಿಯನ್ನು ಸ್ಥಳಾಂತರಿಸುವ ಸಂಬಂಧ ಹೈಕೋರ್ಟ್ಗೆ, ಸರ್ಕಾರ ಸಲ್ಲಿಸಿರುವ ಅಫಿಡವೀಟ್ ಆಧಾರದಲ್ಲಿ ರಿಟ್ ಅರ್ಜಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಕೆಬಿಜೆಎನ್ಎಲ್ ಕೇಂದ್ರ ಕಚೇರಿಯನ್ನು ದಾವಣಗೆರೆ ವರ್ಗಾಯಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ಹಾಗೂ ಕೈಗೊಂಡ ಕ್ರಮದ ಬಗ್ಗೆ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಆದ್ದರಿಂದ, ವರದಿಯಲ್ಲಿ ಪ್ರಸ್ತಾಪಿಸಿರುವ ಅಂಶಗಳನ್ನು ಪರಿಶೀಲಿಸಿ ನಿಗಮಗಳ ಕೇಂದ್ರ ಕಚೇರಿಯನ್ನು ಸ್ಥಳಾಂತಕ್ಕೆ ಕೈಗೊಂಡ ಕ್ರಮದ ವರದಿಯನ್ನು ಕೂಡಲೇ ಸಲ್ಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.