ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್, ಕೇಂದ್ರ ಸರ್ಕಾರದ ವಿರುದ್ದ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿತದಲ್ಲಿದೆ. ಪ್ರತಿ ಡಾಲರ್‌ಗೆ 90 ರೂ. ಗಡಿ ದಾಟುವ ಅಂಚಿನಲ್ಲಿದೆ. 2013 ಜುಲೈನಲ್ಲಿ ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಮೋದಿ, ಯುಪಿಎ ಸರ್ಕಾರ ಕರೆನ್ಸಿಯನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಅಣಕಿಸಿದ್ದನ್ನು ನೆನಪಿಸಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.