ಮರುದಿನ, ಹೋಟೆಲ್ನ ಶುಚಿಗೊಳಿಸುವ ಸಿಬ್ಬಂದಿ 5ನೇ ಮಹಡಿಯ ಅವರ ಕೋಣೆಗೆ ಪ್ರವೇಶಿಸಿದಾಗ, ರಾಜಕುಮಾರ ಶೌಚಾಲಯದ ನೆಲದ ಮೇಲೆ ಬಿದ್ದಿರುವುದು ಕಂಡುಬಂದಿದೆ. ಹೋಟೆಲ್ ಸಿಬ್ಬಂದಿ ತಕ್ಷಣ ತುರ್ತು ಸೇವೆಗೆ ಕರೆ ಮಾಡಿದ್ದು, ಸ್ಥಳಕ್ಕೆ ಆಗಮಿಸಿದ ಪ್ಯಾರಾಮೆಡಿಕ್ ಸಿಬ್ಬಂದಿ ಅವರನ್ನು ಬದುಕಿಸಲು ಯತ್ನಿಸಿದರೂ ಫಲಕಾರಿಯಾಗದೆ, ನವೆಂಬರ್ 25 ರಂದು ಮೃತಪಟ್ಟಿರುವುದಾಗಿ ಘೋಷಿಸಲಾಯಿತು.