ಆಂಧ್ರ ಪ್ರದೇಶದಲ್ಲಿ 24 ಗಂಟೆಯೊಳಗೆ ಮತ್ತೆ ಏಳು ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು| Maoists Killed

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ಮಾರೆಡುಮಿಲ್ಲಿ ಪ್ರದೇಶದಲ್ಲಿ ಇಂದು (ನ. 19) ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಮತ್ತೆ ಏಳು ಮಂದಿ ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆMaoists Killed) ಎಂದು ವರದಿಯಾಗಿದೆ.
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಬೆಟಾಲಿಯನ್ 1 ರ ಮುಖ್ಯಸ್ಥ ಮದ್ವಿ ಹಿಡ್ಮಾ ಸೇರಿದಂತೆ ಆರು ಮಾವೋವಾದಿಗಳು ಮೃತಪಟ್ಟ 24 ಗಂಟೆಯೊಳಗೆ ಈ ಘಟನೆ ನಡೆದಿದೆ.
ಈ ಕುರಿತು ಮಾಹಿತಿ ನೀಡಿದ ಆಂಧ್ರ ಪ್ರದೇಶ ಗುಪ್ತಚರ ವಿಭಾಗದ ಎಡಿಜಿ ಮಹೇಶ್ ಚಂದ್ರ ಲಡ್ಡಾ, ಮಂಗಳವಾರದ ಕಾರ್ಯಾಚರಣೆಯ ಮುಂದುವರಿದ ಭಾಗವಾಗಿ ಕ್ಷೇತ್ರದಿಂದ ಬಂದ ಮಾಹಿತಿಯ ಪ್ರಕಾರ ಇದುವರೆಗೆ ಏಳು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ಸೇರಿದಂತೆ ಏಳು ಮೃತದೇಹಗಳನ್ನು ಸ್ಥಳದಿಂದ ಹೊರತೆಗೆಯಲಾಗಿದೆ. ಸ್ಥಳದಿಂದ ಎರಡು ಎಕೆ -47 ರೈಫಲ್‌ಗಳು ಸೇರಿದಂತೆ ಎಂಟು ಶಸ್ತ್ರಾಸ್ತ್ರಗಳನ್ನು ಪಡೆಗಳು ವಶಪಡಿಸಿಕೊಂಡಿವೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಮೃತಪಟ್ಟವರಲ್ಲಿ ಆಂಧ್ರ-ಒಡಿಶಾ ಗಡಿ ಕಾರ್ಯಾಚರಣೆ ಉಸ್ತುವಾರಿ, ಕೇಂದ್ರ ಸಮಿತಿ ಸದಸ್ಯ, ತಾಂತ್ರಿಕ ಕಾರ್ಯಾಚರಣೆಗಳು, ಶಸ್ತ್ರಾಸ್ತ್ರ ತಯಾರಿಕೆ ಹಾಗೂ ಸಂವಹನ ವ್ಯವಸ್ಥೆಗಳಲ್ಲಿ ಪರಿಣಿತ ಎಂದು ಗುರುತಿಸಲ್ಪಟ್ಟಿರುವ ಮೆಟ್ಟೂರು ಜೋಗ್​ ರಾವ್ @ ಶಂಕರ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ವಿಭಾಗೀಯ ಸಮಿತಿ ಸದಸ್ಯೆ (AOBSZC) ಸೀತಾ@ ಜ್ಯೋತಿ ಸೇರಿ ಪ್ರದೇಶ ಸಮಿತಿಯ ಐವರು ಸದಸ್ಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ, (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net