ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಿ ಚಿದಂಬರಂ, ಜೈರಾಮ್ ರಮೇಶ್, ಪ್ರಮೋದ್ ತಿವಾರಿ ಹಾಗೂ ಮನೀಶ್ ತಿವಾರಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು. ಸಭೆಯಲ್ಲಿ ಕೇಂದ್ರದ ಬಜೆಟ್ ಮೇಲಿನ ಚರ್ಚೆ ಮತ್ತು ಜಿ-ರಾಮ್-ಜಿ ಉದ್ಯೋಗ ಖಾತರಿ ಯೋಜನೆಯ ವಿರುದ್ಧ ಹೋರಾಟದ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ.