ಪ್ರಧಾನ್ ರಾಜೀನಾಮೆ ಸಲ್ಲಿಸಿದ ತಕ್ಷಣ ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ವಿದ್ಯಾರ್ಥಿ ಶಕ್ತಿ ಚಿರಾಯುವಾಗಲಿ ಎಂದು ಪೋಸ್ಟ್ ಮಾಡಿದೆ. ಅಲ್ಲದೆ, ಪ್ರಧಾನ್ ರಾಜೀನಾಮೆಯ ಸುದ್ದಿ ತಿಳಿಯುತ್ತಿದ್ದಂತೆ ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಸಂತಸ ವ್ಯಕ್ತಪಡಿಸುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದೆ. ಇದೇ ಪ್ರಜಾಪ್ರಭುತ್ವ. ಅವರು ರಾಜೀನಾಮೆ ನೀಡಿದ್ದಾರೆ. ನೆನಪಿಡಿ, ಕಾಕ್ರೋಚ್ ಜೊತೆ ಎಂದಿಗೂ ಆಟವಾಡಬೇಡಿ ಎಂದಿದ್ದು, ತಮ್ಮ ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆಗಳು ಇನ್ನೂ ಈಡೇರದೆ ಉಳಿದಿರುವುದರಿಂದ ಕಾಕ್ರೋಚ್ಗಳು (ಪ್ರತಿಭಟನಾಕಾರರು) ತಕ್ಷಣವೇ ನಿರ್ಗಮಿಸುವುದಿಲ್ಲ ಎಂದು ಸಿಜೆಪಿ ಸ್ಪಷ್ಟಪಡಿಸಿದೆ.