ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಭೂಪೇನ್ ಬೋರಾ, ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ನನ್ನ ರಾಜೀನಾಮೆ ಪತ್ರವನ್ನು ಹೈಕಮಾಂಡ್ಗೆ ಕಳುಹಿಸಿದ್ದೇನೆ. ಇದರ ಬಗ್ಗೆ ನಾನು ಹೆಚ್ಚು ಹೇಳಲು ಬಯಸುವುದಿಲ್ಲ. ಆದರೆ ಇದು ಸ್ವಾಭಿಮಾನದ ವಿಷಯ. ಅಸ್ಸಾಂನಲ್ಲಿ ಪಕ್ಷವನ್ನು ಹೇಗೆ ಮುನ್ನಡೆಸಲಾಗುತ್ತಿದೆ ಎಂಬುದರ ಕುರಿತು ಕೇಂದ್ರ ನಾಯಕತ್ವಕ್ಕೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.