ಕೆನಡಾದ ಟಂಬ್ಲರ್ ರಿಡ್ಜ್‌ನ ಶಾಲೆಯಲ್ಲಿ ಗುಂಡಿನ ದಾಳಿ: ದುಷ್ಕರ್ಮಿ ಸೇರಿ 9 ಸಾವು, 12 ಮಂದಿಗೆ ಗಾಯ | Shooting

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಒಟ್ಟಾವ: ಕೆನಡಾದ ಟಂಬ್ಲರ್ ರಿಡ್ಜ್‌ನಲ್ಲಿರುವ ಬ್ರಿಟಿಷ್ ಕೊಲಂಬಿಯಾ ಶಾಲೆಯಲ್ಲಿ ಮಂಗಳವಾ(ಫೆ. 10) ಗುಂಡಿನ ದಾಳಿ(shooting) ನಡೆದಿದ್ದು, ದಾಳಿ ನಡೆಸಿದ ದುಷ್ಕರ್ಮಿ ಸೇರಿ 9 ಮಂದಿ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಟಂಬ್ಲರ್ ರಿಡ್ಜ್ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಪ್ರಕಾರ, ಮಂಗಳವಾರ ಮಧ್ಯಾಹ್ನ 1.20ಕ್ಕೆ ಗುಂಡಿನ ದಾಳಿ ಘಟನೆ ನಡೆದಿದೆ. ಶಾಲೆಯಲ್ಲಿ ಆರು ಜನ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಹಾಗೂ ಇಬ್ಬರು ಸಮುದಾಯದ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಆರೋಪಿ ಸ್ವಯಂ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾಗಿ ಶಂಕಿಸಲಾಗಿದೆ ಎಂದು ಹೇಳಿದೆ.
ಘಟನೆ ಬಳಿಕ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದು, ಒಬ್ಬ ಶಂಕಿತನ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬ ಕೃತ್ಯದಲ್ಲಿ ಭಾಗಿಯಾಗಿದ್ದನೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮಧ್ಯಾಹ್ನ 2 ಗಂಟೆಯ ನಂತರ ಪ್ರದೇಶದಾದ್ಯಂತ ಮೊಬೈಲ್ ಫೋನ್‌ಗಳಿಗೆ ತುರ್ತು ಎಚ್ಚರಿಕೆಯನ್ನು ಕಳುಹಿಸಿದ್ದು, ಯಾರು ಮನೆಯಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದೆ.
ಪ್ರಾಂತೀಯ ಸರ್ಕಾರದ ವೆಬ್‌ಸೈಟ್ ಪ್ರಕಾರ, ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ 7 ರಿಂದ 12ನೇ ತರಗತಿಯವರೆಗೆ ಒಟ್ಟು 175 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆಂದು ಎಂದು ತಿಳಿಸಿದೆ. ಪೊಲೀಸರು ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಹಿನ್ನೆಲೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net