‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಮತ್ತು ‘ಅನ್ನಭಾಗ್ಯ’ ಯೋಜನೆ, ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ ಮತ್ತು ಪಡಿತರ ವಿತರಣೆ ಸಮಸ್ಯೆ ಕುರಿತು ದೂರು ನೀಡಲು ಇಲಾಖೆ, ‘1967’ ಸಹಾಯವಾಣಿ ಆರಂಭಿಸಿದೆ. ಪ್ರತಿನಿತ್ಯ 200-300 ದೂರು ದಾಖಲಾಗುತ್ತಿವೆ. ದೂರು ಸ್ವೀಕರಿಸುವ ಸಿಬ್ಬಂದಿ ಸಂಬಂಧಿಸಿದ ಅಧಿಕಾರಿಗಳಿಗೆ ವರ್ಗಾವಣೆ ಮಾಡುತ್ತಿದ್ದಾರೆ. ಇದು ಇಲಾಖೆಯ ಹಳೆಯ ಮ್ಯಾನ್ಯುಯಲ್ ವ್ಯವಸ್ಥೆಯಾಗಿದೆ. ಇದಕ್ಕೆ ಹೊಸ ಸ್ಪರ್ಶ ನೀಡಲು ಇಲಾಖೆ ಸಿದ್ಧತೆ ನಡೆಸಿದೆ. ಇದೀಗ, ಎಐ ತಂತ್ರಜ್ಞಾನ ಬಳಸಿ ಪ್ರಸ್ತುತ ಜಾರಿಯಲ್ಲಿರುವ ಇಲಾಖೆಯ ಸಹಾಯವಾಣಿ ವ್ಯವಸ್ಥೆಯನ್ನು ಸ್ವಯಂಚಾಲಿತ ದೂರು ಕೇಂದ್ರ, ಧ್ವನಿಚಾಟ್ಬಾಟ್ ಮತ್ತು ಲೈವ್ ಕರೆ ವರ್ಗಾವಣೆ ವ್ಯವಸ್ಥೆ ಒಳಗೊಂಡ ‘ಸ್ಮಾರ್ಟ್ ಅನ್ನವಾಣಿ’ ಯೋಜನೆ ಜಾರಿಗೆ ತರಲಿದೆ. ಮುಂದಿನ 2-3 ತಿಂಗಳಲ್ಲಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.