ನವದೆಹಲಿ: ವಿಶ್ವದ ಅತಿ ದೊಡ್ಡ ತೈಲ ಮತ್ತು ಅನಿಲ ಸಾಗಾಣಿಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಭೀಕರ ಸಮರ ನಡೆಯುತ್ತಿದ್ದರೂ, ಭಾರತದ ಪಾಲಿಗೆ ಇರಾನ್ ಒಂದು ಅಪರೂಪದ ವಿನಾಯಿತಿ ನೀಡಿದೆ. ಜಾಗತಿಕ ಇಂಧನ ಪೂರೈಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಿರುವ ಇರಾನ್, ಭಾರತದ ಧ್ವಜವಿರುವ ಎರಡು ಎಲ್‌ಪಿಜಿ(LPG ships) ಹಡಗುಗಳು ಸುರಕ್ಷಿತವಾಗಿ ಸಂಚರಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.