ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ಶ್ರೀಲಂಕಾದ ಸ್ಪಿನ್ ಜಾಲಕ್ಕೆ ಸಿಲುಕಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿತು. ಆರಂಭಿಕ ಆಟಗಾರ ಫಿಲ್ ಸಾಲ್ಟ್ (62 ರನ್, 40 ಎಸೆತ, 6 ಬೌಂಡರಿ, 2 ಸಿಕ್ಸರ್) ಏಕಾಂಗಿ ಹೋರಾಟ ನಡೆಸದಿದ್ದರೆ ಇಂಗ್ಲೆಂಡ್ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿತ್ತು. ವಿಲ್ ಜ್ಯಾಕ್ಸ್ (21) ಹೊರತುಪಡಿಸಿದರೆ ಉಳಿದ ಬ್ಯಾಟರ್‌ಗಳು ಲಂಕಾ ಸ್ಪಿನ್ನರ್ ದುನಿತ್ ವೆಲ್ಲಲಾಗೆ (3 ವಿಕೆಟ್) ಮತ್ತು ಮಹೇಶ್ ತೀಕ್ಷಣ ಅವರ ದಾಳಿಗೆ ತತ್ತರಿಸಿದರು.