ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಹಾರಾಷ್ಟ್ರ, ಹರಿಯಾಣ, ಬಿಹಾರ ಹಾಗೂ ದೆಹಲಿಯ ಜನರು ಇಂಡಿಯಾ ಒಕ್ಕೂಟವನ್ನು ತಿರಸ್ಕರಿಸಿದಂತೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ಜನರು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟವನ್ನು ತಿರಸ್ಕರಿಸುತ್ತಾರೆ. ಮುಂದಿನ ಅವಧಿಗೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.