ಭಾರತದ ಪರ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಮ್ಮ ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದರು. ತಮ್ಮ 3 ಓವರ್ಗಳಲ್ಲಿ ಕೇವಲ 24 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸುವ ಮೂಲಕ ಅಫ್ಘಾನ್ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಉತ್ತಮ ಸಾಥ್ ನೀಡಿದ ವೇಗಿ ಅರ್ಷದೀಪ್ ಸಿಂಗ್ 35 ರನ್ನಿಗೆ 2 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್ ಮತ್ತು ಕಮ್ಬ್ಯಾಕ್ ಮಾಡಿದ ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಹಂಚಿಕೊಂಡರು.