ಈ ಕುರಿತು ಸೋಮವಾರ(ಜ. 12) ಮಾತನಾಡಿರುವ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೆಲವು ಸರ್ಕಾರಿ ನೌಕರರು ಅವರ ವೃದ್ಧ ಪೋಷಕರನ್ನು ನಿರ್ಲಕ್ಷಿಸುತ್ತಿರುವ ಮಾಹಿತಿಗಳು ಬಂದಿವೆ. ಮುಂಬರುವ ಬಜೆಟ್ ಅಧಿವೇಶನದಲ್ಲಿ ತಮ್ಮ ಸರ್ಕಾರವು ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನದಿಂದ ಶೇ. 10-15 ರಷ್ಟು ಕಡಿತಗೊಳಿಸಿ, ಆ ಮೊತ್ತವನ್ನು ಪೋಷಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲು ಕಾನೂನು ಜಾರಿಗೆ ತರುವುದಾಗಿ ಹೇಳಿದ್ದಾರೆ.