ಇಂದೋರ್​ನಲ್ಲಿ ಭೀಕರ ರಸ್ತೆ ಅಪಘಾತ: ಮಾಜಿ ಗೃಹಸಚಿವರ ಪುತ್ರಿ ಸೇರಿ ಮೂವರು ಸ್ಥಳದಲ್ಲೇ ಸಾವು | Terrible accident

ಘಟನೆಯ ಸ್ಥಳ
ಘಟನೆಯ ಸ್ಥಳ
Published on
ಭೋಪಾಲ್: ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು(ಜ. 09) ಮುಂಜಾನೆ ಭೀಕರ ಅಪಘಾತ(Terrible accident) ಸಂಭವಿಸಿದ್ದು, ಘಟನೆಯಲ್ಲಿ ಮಾಜಿ ಗೃಹಚಿವ ಬಾಲಾ ಬಚ್ಚನ್ ಅವರ ಪುತ್ರಿ ಪ್ರೇರಣಾ ಬಚ್ಚನ್ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದೋರ್‌ನ ರಾಲಮಂಡಲ್ ಪ್ರದೇಶದಲ್ಲಿ ಬೆಳಿಗ್ಗೆ 5.15 ರ ಸುಮಾರಿಗೆ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ರಣಾ ಬಚ್ಚನ್, ಪ್ರಖರ್ ಕಸ್ಲಿವಾಲ್ ಹಾಗೂ ಮನ ಸಂಧು ಎನ್ನುವವರು ಮೃತಪಟ್ಟಿದ್ದರೇ, ಅನುಷ್ಕಾ ರಥಿ ಎನ್ನುವವರು ತೀವ್ರ ಗಾಯಗೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಡಿಸಿಪಿ ಷ್ಣಲಾಲ್ ಚಂದಾನಿ, ಪ್ರಖರ್ ಕಾಸ್ಲಿವಾಲ್ ಅವರ ಹುಟ್ಟುಹಬ್ಬದ ಆಚರಣೆ ಮುಗಿಸಿಕೊಂಡು ಪ್ರೇರಣಾ, ಪ್ರಖರ್, ಮನಾ ಮತ್ತು ಅನುಷ್ಕಾ ಬೂದು ಬಣ್ಣದ ಟಾಟಾ ನೆಕ್ಸಾನ್ ಕಾರಿನಲ್ಲಿ (ನೋಂದಣಿ ಸಂಖ್ಯೆ MP13 ZS 8994) ಮನೆಗೆ ವಾಪಸ್ ಆಗುತ್ತಿದ್ದರು. ಪ್ರಖರ್ ಕಾರನ್ನು ಚಲಾಯಿಸುತ್ತಿದ್ದು, ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಪ್ರಖರ್ ವಾಹನ ಚಲಾಯಿಸುವಾಗ ಮದ್ಯ ಸೇವಿಸಿದ್ದು ತಿಳಿದು ಬಂದಿದೆ. ವಾಹನವು ಗಂಟೆಗೆ 100 ಕಿ.ಮೀ.ಗಿಂತ ಹೆಚ್ಚಿನ ವೇಗದಲ್ಲಿ ಚಲಿಸುತ್ತಿತ್ತು. ರಿನಿಂದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಪಘಾತಕ್ಕೂ ಮುನ್ನ ಕೊಕೊ ಫಾರ್ಮ್‌ನಲ್ಲಿ ಪಾರ್ಟಿ ನಡೆಯುತ್ತಿತ್ತು ಎಂದು ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net