ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಂ. ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಳಗಾವಿ, ಬೀದರ್, ಚಿತ್ರದುರ್ಗ ಮತ್ತು ಗದಗ ಸೇರಿ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳ ಕನಿಷ್ಠ ತಾಪಮಾನದಲ್ಲಿ ಸಾಮಾನ್ಯಗಿಂತ 2-3 ಡಿ.ಸೆ. ಹೆಚ್ಚಳವಾಗಿದೆ. ಇದರಿಂದಾಗಿ ಶೀತ ಅಲೆಯಿಂದ ಹೈರಾಣಾಗಿದ್ದ ಜನರಿಗೆ ಬೆಚ್ಚಗಿನ ವಾತಾವರಣ ಅನುಭವವಾಗಿದೆ.