ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆಯಲಿರುವ ಅಧಿಕೃತ ಸಭೆಗೂ ಮುನ್ನ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಕೆ.ಸಿ. ವೇಣುಗೋಪಾಲ್ರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದ್ದು, ಇದೇ ವೇಳೆ ವೇಣುಗೋಪಾಲ್ ವಿರುದ್ಧ ಕೇರಳದ ಹಲವು ಭಾಗಗಳಲ್ಲಿ ಅವಹೇಳನಕಾರಿ ಪೋಸ್ಟರ್‌ಗಳು ಕಾಣಿಸಿಕೊಂಡಿವೆ, ಇದು ಪಕ್ಷದೊಳಗಿನ ಭಿನ್ನಮತವನ್ನು ಬೀದಿಗೆ ತಂದಿದ್ದು, ಈ ಪೋಸ್ಟರ್‌ಗಳ ಹಿಂದೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಬೆಂಬಲಿಗರಿದ್ದಾರೆ ಎಂಬ ಆರೋಪವೂ ಸಹ ಕೇಳಿಬಂದಿದೆ.