ಈಗ, ಪ್ರಾದೇಶಿಕ ನಾಯಕರೊಂದಿಗೆ ಕನಿಮೋಳಿ ನಡೆಸುತ್ತಿರುವ ಸತತ ಭೇಟಿಗಳು, ರಾಷ್ಟ್ರ ರಾಜಕಾರಣದಲ್ಲಿ ಡಿಎಂಕೆ ತನ್ನ ಸ್ಥಾನವನ್ನು ಪಡೆದುಕೊಳ್ಳಲು ಮಾಡುತ್ತಿರುವ ಪ್ರಯತ್ನವೆಂದೇ ವಿಶ್ಲೇಷಿಸಲಾಗುತ್ತಿದೆ. ಕನಿಮೋಳಿ ಮೊದಲು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಅವರ ಮಾತೋಶ್ರೀ ನಿವಾಸದಲ್ಲಿ ಭೇಟಿಯಾದರು. ಈ ಭೇಟಿಯ ವಿವರಗಳನ್ನು ರಹಸ್ಯವಾಗಿಡಲಾಗಿದ್ದರೂ, ತಮಿಳುನಾಡಿನಲ್ಲಿ ಕಾಂಗ್ರೆಸ್ ಕೈಗೊಂಡ ನಿರ್ಧಾರದ ನಂತರ ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ ಮತ್ತು ಇಂಡಿಯಾ ಒಕ್ಕೂಟದ ಭವಿಷ್ಯದ ಕುರಿತು ಚರ್ಚೆ ನಡೆದಿದೆ ಎಂದು ಶಿವಸೇನೆ (ಯುಬಿಟಿ) ನಾಯಕರು ತಿಳಿಸಿದ್ದಾರೆ.