ನಾವು ಪ್ರತ್ಯೇಕತಾವಾದಿ ಮತ್ತು ಭಾರತ ವಿರೋಧಿ ಶಕ್ತಿಗಳಿಗೆ ಆಶ್ರಯ ನೀಡುತ್ತೇವೆ. ನಂತರ ಏಳು ಸಹೋದರಿಯರನ್ನು ಭಾರತದಿಂದ ಬೇರ್ಪಡಿಸುತ್ತೇವೆ ಎಂದು ಅಬ್ದುಲ್ಲಾ ಹೇಳಿದ್ದಾರೆ. ಅಲ್ಲದೆ, ಬಾಂಗ್ಲಾದೇಶದ ಸಾರ್ವಭೌಮತ್ವ, ಸಾಮರ್ಥ್ಯ, ಮತದಾನದ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಗೌರವಿಸದ ಶಕ್ತಿಗಳಿಗೆ ನೀವು ಆಶ್ರಯ ನೀಡಿದರೆ, ಬಾಂಗ್ಲಾದೇಶವು ಪ್ರತಿಕ್ರಿಯಿಸುತ್ತದೆ ಎಂದು ನಾನು ಭಾರತಕ್ಕೆ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಅಬ್ದುಲ್ಲಾ ಕಿಡಿಕಾರಿದ್ದರು.