ಗೃಹಲಕ್ಷ್ಮಿ ಯೋಜನೆಯಲ್ಲಿ 5,000 ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಸಿಎಜಿ ವರದಿಯಲ್ಲಿ ಪ್ರಸ್ತಾಪವಾಗಿದ್ದರೂ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿಲ್ಲ ಎಂದು ಆರೋಪಿಸಿರುವ ವಿಜಯೇಂದ್ರ, ಶಕ್ತಿ ಯೋಜನೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಸರಿಯಾಗಿ ಬಸ್‌ಗಳಿಲ್ಲದೆ ಶಾಲಾ ಮಕ್ಕಳಿಗೆ ತೊಂದರೆಯಾಗಿದೆ. ಈ ಹಿಂದೆ ಮಾಜಿ ಸಿಎಂ ಬಿಎಸ್ವೈ ನೀಡುತ್ತಿದ್ದ ಸೈಕಲ್‌ಗಳನ್ನೂ ನಿಲ್ಲಿಸಲಾಗಿದೆ. ಯುವನಿಧಿ ಯೋಜನೆಯಡಿ ಸುಳ್ಳು ಲೆಕ್ಕ ನೀಡಲಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಬೃಹತ್ ಕೈಗಾರಿಕೆ ತರಲು ಅಥವಾ ಶಿಕ್ಷಕರ ನೇಮಕಾತಿ ಮಾಡಲು ಸರ್ಕಾರ ವಿಫಲವಾಗಿದೆ. ಅನ್ನಭಾಗ್ಯದಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ತಮ್ಮದೆಂದು ಪ್ರಚಾರ ಮಾಡಿಕೊಂಡಿದ್ದ ಸರ್ಕಾರ, ಈಗ ಬಿಪಿಎಲ್ ಕಾರ್ಡ್‌ಗಳನ್ನು ಕಟ್ ಮಾಡಿ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ ಎಂದು ದೂರಿದರು.