ಸಾಹಿತ್ಯ ಆಕಾಡೆಮಿ ಪ್ರಶಸ್ತಿ ಘೋಷಣೆ ತಡೆಹಿಡಿದ ಕೇಂದ್ರ ಸಂಸ್ಕೃತಿ ಸಚಿವಾಲಯ; ಹೆಸರುಗಳು ಪರಿಶೀಲನೆ | Sahitya Akademi Award

ಕೇಂದ್ರ ಸಾಹಿತ್ಯ ಆಕಾಡೆಮಿ
ಕೇಂದ್ರ ಸಾಹಿತ್ಯ ಆಕಾಡೆಮಿ
Published on
ನವದೆಹಲಿ: ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಕೇಂದ್ರ ಸಾಹಿತ್ಯ ಆಕಾಡೆಮಿಯಿಂದ ನೀಡಲಾಗುವ ವಾರ್ಷಿಕ ಸಾಹಿತ್ಯ ಆಕಾಡೆಮಿ ಪ್ರಶಸ್ತಿಗಳ(Sahitya Akademi Award) ಹೆಸರನ್ನು ಘೋಷಣೆ ಮಾಡುವುದನ್ನು ಕೇಂದ್ರ ಸಂಸ್ಕೃತಿ ಸಚಿವಾಲಯ ತಡೆಹಿಡಿದಿದೆ ಎಂದು ಶುಕ್ರವಾರ(ಡಿ. 19) ವರದಿಯಾಗಿದೆ.
ಸಾಹಿತ್ಯ ಅಕಾಡೆಮಿ ತನ್ನ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಘೋಷಿಸಲು ಗುರುವಾರ ಪತ್ರಿಕಾಗೋಷ್ಠಿಯನ್ನು ಕರೆದಿತ್ತು. ಆದರೆ ಪ್ರಶಸ್ತಿಗಳಿಗೆ ಆಯ್ಕೆ ಮಾಡಿರುವ ಹೆಸರುಗಳನ್ನು ಪರಿಶೀಲಿಸುವುದಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ಹೇಳಿದ್ದು, ಹಾಗಾಗಿ ಘೋಷಣೆ ಮುಂದೂಡುವಂತೆ ತಿಳಿಸಿದೆ.
ಗುರುವಾರ ಸಾಹಿತ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಪ್ರಶಸ್ತಿ ಪುರಷ್ಕತರನ್ನು ಆಯ್ಕೆ ಮಾಡಿದ್ದು, ಬಳಿಕ ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲು ನಿರ್ಧರಿಸಲಾಗಿತ್ತು. ಆದರೆ ಸುದ್ದಿಗೋಷ್ಠಿಯ ಕೆಲವೇ ನಿಮಿಷಗಳಲ್ಲಿ ಸುದ್ದಿಗೋಷ್ಠಿಯನ್ನು ಮುಂದೂಡುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಸೂಚಿಸಿದ್ದಾರೆ. ಈ ಹಿನ್ನೆಲೆ ಆಕಾಡೆಮಿ ಅಧ್ಯಕ್ಷರು ಸುದ್ದಿಗೋಷ್ಠಿಯನ್ನು ಮುಂದೂಡಿದ್ದಾರೆ.
ಮೂಲಗಳ ಪ್ರಕಾರ, ಪ್ರಶಸ್ತಿ ಪುರಸ್ಕೃತರನ್ನು ಪರಿಶೀಲಿಸಲು ಸರ್ಕಾರ ಬಯಸ್ಸಿದ್ದಾಗಿ, ಶಸ್ತಿಗಳ ನಿಯಮಗಳಲ್ಲಿ ಸಚಿವಾಲಯವು ಕೆಲವು ಬದಲಾವಣೆಗಳನ್ನು ಮಾಡಲು ಉದ್ದೇಶಿಸಿದೆ. ಸಚಿವಾಲಯದ ಜೊತೆ ಸಮಾಲೋಚಿಸಿ ಬಳಿಕ ಪ್ರಶಸ್ತಿಗಳನ್ನು ಘೋಷಣೆ ಮಾಡುವಂತೆ ಹೇಳಿದೆ.
ಸಾಹಿತ್ಯ ಅಕಾಡೆಮಿಯು 24 ಭಾರತೀಯ ಭಾಷೆಗಳಲ್ಲಿನ ಸಾಹಿತ್ಯ ಕೃತಿಗಳಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡುತ್ತದೆ. ಆದರೆ ಈ ವರ್ಷ ಕೇಂದ್ರ ಸರ್ಕಾರ ಪ್ರಶಸ್ತಿ ಘೋಷಣೆ ಬಗ್ಗೆ ತಡೆ ನೀಡಿದ್ದು, ತಮ್ಮ ಅನುಮತಿ ಬಳಿಕ ಘೋಷಣೆ ಮಾಡುವಂತೆ ಹೇಳಿದೆ. ಈ ಬಗ್ಗೆ ಆಕಾಡೆಮಿಯ ಅಧ್ಯಕ್ಷರು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ (ಏಜೆನ್ಸೀಸ್).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net