ಶನಿವಾರ ನಡೆದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ RSS ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಇತಿಹಾಸ ಮತ್ತು ದೇಶದ ಅಭಿವೃದ್ಧಿಯಲ್ಲಿ ಅದರ ಕೊಡುಗೆಯನ್ನು ವಿವರಿಸಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ದೇಶದಲ್ಲಿ ಹಲವರು ತಪ್ಪು ತಿಳಿಕೊಂಡಿದ್ದಾರೆ. ನಮ್ಮ ಸಂಘಟನೆಯು ಸಮಾಜದ ಯಾವುದೇ ವರ್ಗಕ್ಕೆ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ ಎಂದಿಗೂ ವಿರೋಧಿಯಾಗಿಲ್ಲ ಎಂದು ಪ್ರತಿಪಾದಿಸಿದ್ದರು. ಆದರೆ, ಈ ಶೈಕ್ಷಣಿಕ ಗಣ್ಯರ ಉಪಸ್ಥಿತಿಯು ಕೇರಳದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಧ್ರುವೀಕರಣಕ್ಕೆ ಕಾರಣವಾಗಿರುವುದಂತೂ ಸುಳ್ಳಲ್ಲ,(ಏಜೆನ್ಸೀಸ್).