

ಪುಣೆ: ಮಲ್ಟಿ ಕ್ರೋಡ್ ಆರ್ಥಿಕ ವಂಚನೆ ಪ್ರಕರಣದಲ್ಲಿ ದೇಶ ತೊರೆದು ತಲೆಮರೆಸಿಕೊಂಡಿದ್ದ ಆರೋಪಿ ವಿಶಾಖಾ ರಾಠೋಡ್ (
Vishakha Rathod)
ಅವರನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಯಿಂದ ಯಶಸ್ವಿಯಾಗಿ ಭಾರತಕ್ಕೆ ಗಡೀಪಾರು ಮಾಡಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ), ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಗೃಹ ಸಚಿವಾಲಯದ ಜಂಟಿ ಕಾರ್ಯಾಚರಣೆಯ ಫಲವಾಗಿ ಈ ಪ್ರಮುಖ ಬೆಳವಣಿಗೆ ಸಾಧ್ಯವಾಗಿದೆ.