ಗುಜರಾತ್ ಟೈಟನ್ಸ್ ತಂಡಕ್ಕೆ ಆರ್ಸಿಬಿ ಬೌಲರ್ಗಳು ಪವರ್ಪ್ಲೇನಲ್ಲೇ ಭಾರಿ ಆಘಾತ ನೀಡಿದರು. ಅಪಾಯಕಾರಿ ಆರಂಭಿಕ ಆಟಗಾರರಾದ ನಾಯಕ ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. ಆದರೆ, ಮಧ್ಯಮ ಕ್ರಮಾಂಕದಲ್ಲಿ ವಾಷಿಂಗ್ಟನ್ ಸುಂದರ್ ತಮಗೆ ಸಿಕ್ಕ ಜೀವದಾನದ ಸಂಪೂರ್ಣ ಲಾಭ ಪಡೆದು, ಜವಾಬ್ದಾರಿಯುತ ಅರ್ಧಶತಕ ಸಿಡಿಸುವ ಮೂಲಕ ತಂಡ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು.