ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್, ಶಿಮ್ರಾನ್ ಹೆಟ್ಮೆಯರ್ ಅವರ ಸ್ಫೋಟಕ ಅರ್ಧಶತಕದ (64 ರನ್, 36 ಎಸೆತ) ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ಗಳ ಸವಾಲಿನ ಮೊತ್ತ ಪೇರಿಸಿತು. ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್ ಒಂದು ಹಂತದಲ್ಲಿ ನಾಯಕ ರಿಚಿ ಬೆರಿಂಗ್ಟನ್ ಅವರ ಹೋರಾಟದಿಂದ ಪಂದ್ಯದಲ್ಲಿ ಹಿಡಿತ ಸಾಧಿಸುವ ಮುನ್ಸೂಚನೆ ನೀಡಿತ್ತು.