ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ಬರೋಬ್ಬರಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಭಾರಿ ಬಹುಮತದೊಂದಿಗೆ ಇತಿಹಾಸ ನಿರ್ಮಿಸಿದೆ. ಆ ನಂತರ ನಡೆದ ಫಾಲ್ತಾ ವಿಧಾನಸಭಾ ಉಪಚುನಾವಣೆಯಲ್ಲೂ ಜಯಗಳಿಸುವ ಮೂಲಕ ಬಿಜೆಪಿ ತನ್ನ ಒಟ್ಟು ಸ್ಥಾನಗಳ ಸಂಖ್ಯೆಯನ್ನು 207 ಕ್ಕೆ ಹೆಚ್ಚಿಸಿಕೊಂಡಿದೆ. ಮತ್ತೊಂದೆಡೆ, ಕಳೆದ ಚುನಾವಣೆಯಲ್ಲಿ 212 ಸ್ಥಾನಗಳನ್ನು ಗೆದ್ದು ಬೀಗಿದ್ದ ತೃಣಮೂಲ ಕಾಂಗ್ರೆಸ್ (TMC), ಈ ಬಾರಿ ಕೇವಲ 80 ಸ್ಥಾನಗಳಿಗೆ ಕುಸಿದು ಮುಖಭಂಗ ಅನುಭವಿಸಿದೆ. ಈ ಭೀಕರ ಸೋಲಿನ ಬೆನ್ನಲ್ಲೇ ಪಕ್ಷದೊಳಗೆ ಭಿನ್ನಮತದ ಸ್ಫೋಟ ಉಂಟಾಗಿದ್ದು, ಭಾರಿ ಸಂಖ್ಯೆಯ ಟಿಎಂಸಿ ಶಾಸಕರು ಬಂಡಾಯವೆದ್ದಿದ್ದಾರೆ(ಏಜೆನ್ಸೀಸ್).