ಆದರೆ, ಎನ್ಸಿಪಿ (ಎಸ್ಪಿ) ಶಾಸಕ ರೋಹಿತ್ ಪವಾರ್ ಈ ಎಲ್ಲಾ ವರದಿಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇವು ಆಧಾರರಹಿತ ವದಂತಿಗಳಷ್ಟೆ ಎಂದಿದ್ದಾರೆ. ತಮ್ಮ ಪಕ್ಷವು ಕಾಂಗ್ರೆಸ್ ಜೊತೆ ವಿಲೀನವಾಗುವ, ಎನ್ಡಿಎ ಸೇರುವ ಅಥವಾ ಹೊರಗಿನಿಂದ ಬೆಂಬಲ ನೀಡುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬೆಳವಣಿಗೆಯ ಕುರಿತು ಮಾತನಾಡಿರುವ ಕಾಂಗ್ರೆಸ್ ಮುಖಂಡ ,ಮಾಜಿ ಸಚಿವ ಅಮಿತ್ ದೇಶ್ಮುಖ್, ಇವೆಲ್ಲವೂ ಕೇವಲ ಊಹಾಪೋಹಗಳಾಗಿದ್ದು, ಅಧಿಕೃತ ಪ್ರಕಟಣೆಯಾಗುವವರೆಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ. ಶರದ್ ಪವಾರ್ ಅವರು ತಮ್ಮ ಸಿದ್ಧಾಂತಕ್ಕೆ ಬದ್ಧರಾಗಿರುತ್ತಾರೆ ಮತ್ತು ರಾಜ್ಯದಲ್ಲಿ ಅಘಾಡಿ ಹಾಗೂ ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದಲ್ಲೇ ಮುಂದುವರಿಯಲಿದ್ದಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.