Vaibhav Sooryavanshi: ಭಾರತೀಯ ಕ್ರಿಕೆಟ್‌ನಲ್ಲಿ ಸದ್ಯ ಕೇಳಿಬರುತ್ತಿರುವ ಅತಿ ದೊಡ್ಡ ಪ್ರಶ್ನೆ ಒಂದೇ, ಅದು, ಐರ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರಾ..? ಒಂದು ವೇಳೆ ಅವರು ಕಣಕ್ಕಿಳಿದರೆ, ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ ದೇಶವನ್ನು ಪ್ರತಿನಿಧಿಸಿದ ಮಹಾ ದಾಖಲೆ ನಿರ್ಮಾಣವಾಗಲಿದೆ. ಆದರೆ, ಈ ವಂಡರ್ ಕಿಡ್ ಸುತ್ತ ಸೃಷ್ಟಿಯಾಗಿರುವ ಭಾರಿ ಹವಾ ಮತ್ತು ಹೈಪ್‌ಗೆ ಮಣಿದು ಮ್ಯಾನೇಜ್‌ಮೆಂಟ್ ಯಾವುದೇ ತರಾತುರಿಯ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್ ಸ್ಪಷ್ಟಪಡಿಸಿದ್ದಾರೆ.