ಸಾಯಿ ಸುರಭಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು. ರೂಂನಲ್ಲಿ ಮಾತ್ರೆಗಳು ಪತ್ತೆಯಾಗಿದ್ದ ಕಾರಣ, ಇಬ್ಬರು ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಜೊತೆಗೆ ಪರ್ಸನಲ್ ಡೈರಿ ಸಿಕ್ಕಿದ್ದು, ಅದರಲ್ಲಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ. ಇದೇ ಹೊತ್ತಿನಲ್ಲಿ ಮೃತ ಯುವತಿಯ ತಾಯಿ ಗೀತಾ ಮಾಧ್ಯಮಗಳ ಮುಂದೆ ಮಾತನಾಡಿದ್ದು, ಇದೊಂದು ಲವ್ ಜಿಹಾದ್ ಕೊಲೆ, ಮಗಳನ್ನು ಡ್ರಗ್ ಅಡಿಕ್ಟ್ ಮಾಡಿ ಕೊಂದಿದ್ದಾನೆ ಎಂದು ಆರೋಪಿಸಿದ್ದಾರೆ.