ಶುಕ್ರವಾರ ದೆಹಲಿಯ ಭರತ್ ಮಂಟಪದಲ್ಲಿ ನಡೆಯುತ್ತಿದ್ದ ಜಾಗತಿಕ AI ಶೃಂಗಸಭೆಯ ಪ್ರದರ್ಶನ ಮೈದಾನಕ್ಕೆ ನುಗ್ಗಿದ ಭಾರತೀಯ ಯೂತ್ ಕಾಂಗ್ರೆಸ್ (IYC) ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಶರ್ಟ್ಗಳನ್ನು ಬಿಚ್ಚಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸುಮಾರು 10 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.