ಡಬ್ಲ್ಯುಪಿಎಲ್ ವಿಚಾರಕ್ಕೆ ಬರುವುದಾದರೆ, ಹರಾಜಿನಲ್ಲಿ 3.50 ಕೋಟಿ ರೂ.ಗೆ ಆಶ್ಲೀ ಗಾರ್ಡ್ನರ್ ಗುಜರಾತ್ ಜೈಂಟ್ಸ್ ತಂಡವನ್ನು ಸೇರಿದರು. ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದಲ್ಲಿ ತಂಡದ ಇತರ ಬ್ಯಾಟರ್‌ಗಳು ವೈಫಲ್ಯ ಅನುಭವಿಸಿದಾಗ, ಗಾರ್ಡ್ನರ್ ಏಕಾಂಗಿ ಹೋರಾಟ ನಡೆಸಿ 43 ಎಸೆತಗಳಲ್ಲಿ 54 ರನ್ ಸಿಡಿಸಿದ್ದರು. ಬೌಲಿಂಗ್‌ನಲ್ಲಿಯೂ ಮಿಂಚುತ್ತಿರುವ ಇವರು, ಸ್ಮೃತಿ ಮಂಧಾನ ಅವರಂತಹ ಪ್ರಮುಖ ವಿಕೆಟ್‌ಗಳನ್ನು ಪಡೆಯುವ ಮೂಲಕ ಆಲ್‌ರೌಂಡ್ ಪ್ರದರ್ಶನ ಮುಂದುವರಿಸಿದ್ದಾರೆ. ಒಟ್ಟಾರೆಯಾಗಿ, ಈ ಆವೃತ್ತಿಯಲ್ಲಿ ಐದು ಪಂದ್ಯಗಳಿಂದ ಸುಮಾರು 191 ರನ್ ಕಲೆಹಾಕಿರುವ ಅವರು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿದ್ದಾರೆ, (ಏಜೆನ್ಸೀಸ್).