Vaibhav Sooryavanshi : ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ತನ್ನ ಅಸಾಧಾರಣ ಆಟದ ಮೂಲಕ ಕೇವಲ 15ನೇ ವಯಸ್ಸಿಗೆ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಸೃಷ್ಟಿಸಿರುವ ಯುವ ಎಡಗೈ ಬ್ಯಾಟ್ಸ್ಮನ್ ವೈಭವ್ ಸೂರ್ಯವಂಶಿ, ಸದ್ಯ ಟೀಮ್ ಇಂಡಿಯಾದ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದು, ಇತ್ತೀಚೆಗಷ್ಟೇ ಮುಗಿದ ಜಿಂಬಾಬ್ವೆ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಎರಡು ಅರ್ಧಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಅಲ್ಲದೆ, ತಂಡದ ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ಕೂಡ ವಹಿಸಿದರು.