ಪಂದ್ಯದ ವಿಚಾರಕ್ಕೆ ಬರುವುದಾದರೆ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 175 ರನ್ ಗಳಿಸಿತು. ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಇಶಾನ್ ಕಿಶನ್ (40 ಎಸೆತಗಳಲ್ಲಿ 77 ರನ್) ಅದ್ಭುತ ಅರ್ಧಶತಕ ಗಳಿಸಿದರು. ನಾಯಕ ಸೂರ್ಯಕುಮಾರ್ ಯಾದವ್ (32) ಮತ್ತು ಶಿವಂ ದುಬೆ (27) ಉತ್ತಮ ಪ್ರದರ್ಶನ ನೀಡಿದರು. ಪಾಕಿಸ್ತಾನದ ಬೌಲರ್‌ಗಳಲ್ಲಿ ಸೈಮ್ ಅಯೂಬ್ ಮೂರು ವಿಕೆಟ್ ಪಡೆದರೆ, ನಾಯಕ ಸಲ್ಮಾನ್ ಅಲಿ ಅಘಾ, ಶಾಹೀನ್ ಅಫ್ರಿದಿ ಮತ್ತು ಉಸ್ಮಾನ್ ತಾರಿಕ್ ತಲಾ ಒಂದು ವಿಕೆಟ್ ಪಡೆದರು.