Hardik Pandya : ಟೀಮ್ ಇಂಡಿಯಾ ಮತ್ತು ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ, ಈ ಬಾರಿ ಬೇರೆಯದೇ ಕಾರಣಕ್ಕೆ ಸುದ್ದಿಯಾಗಿದ್ದಾರೆ. ತಮ್ಮ ದುಬಾರಿ ಜೀವನಶೈಲಿ ಮತ್ತು ವಿವಾದಗಳ ನಡುವೆ, ಹಾರ್ದಿಕ್ ಅವರ ಒಳ್ಳೆಯ ಅಭ್ಯಾಸ ಬಹಿರಂಗವಾಗಿದ್ದು, ಎಲ್ಲರನ್ನೂ ಅಚ್ಚರಿಗೊಳಿಸಿದೆ. ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಮಾತನಾಡಿರುವ ಪಾಂಡ್ಯ, ಕೋಟ್ಯಂತರ ಬೆಲೆಬಾಳುವ ತನ್ನ ಐಷಾರಾಮಿ ಕಾರಿನಲ್ಲಿ ಹನುಮಾನ್ ಚಾಲೀಸಾವನ್ನು ಕೇಳುತ್ತೇನೆ ಎಂದಿದ್ದಾರೆ.