ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 182 ರನ್‌ಗಳ ಸವಾಲಿನ ಮೊತ್ತವನ್ನು ಕಲೆಹಾಕಿತು. ಐರ್ಲೆಂಡ್ ಪರ ನಾಯಕ ಲೋರ್ಕನ್ ಟಕರ್ ಜವಾಬ್ದಾರಿಯುತ ಆಟವಾಡಿ 36 ಎಸೆತಗಳಲ್ಲಿ 50 ರನ್ ಬಾರಿಸಿದರೆ, ಗರೆಥ್ ಡೆಲಾನಿ ಕೇವಲ 32 ಎಸೆತಗಳಲ್ಲಿ 49 ರನ್ ಸಿಡಿಸಿ ತಂಡದ ಮೊತ್ತ 180ರ ಗಡಿ ದಾಟಲು ನೆರವಾದರು. ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಹರ್ಷಿತ್ ರಾಣಾ 24 ರನ್ ನೀಡಿ 3 ಪ್ರಮುಖ ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ ಮತ್ತು ಅಕ್ಷರ್ ಪಟೇಲ್ ತಲಾ ಎರಡು ವಿಕೆಟ್ ಕಸಿದುಕೊಂಡರು. ಶಿವಂ ದುಬೆ ಒಂದು ವಿಕೆಟ್ ಕಬಳಿಸಿದರು.