ಬುಮ್ರಾ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಆಡಲು ಬಯಸುತ್ತಾರಾದರೂ, ಪ್ರಾಯೋಗಿಕವಾಗಿ ಅದು ಸಾಧ್ಯವಿಲ್ಲ. ಆದ್ದರಿಂದ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ್ ಕುಮಾರ್ ಅವರಂತಹ ಹಿರಿಯ ವೇಗಿಗಳನ್ನು ತಂಡದಲ್ಲಿ ಬಳಸಿಕೊಳ್ಳಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬುಮ್ರಾರಂತಹ ಮೌಲ್ಯಯುತ ಆಟಗಾರನ ದೀರ್ಘಾವಧಿಯ ವೃತ್ತಿಜೀವನವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ಘಾವ್ರಿ ಅವರು ಅಭಿಪ್ರಾಯಪಟ್ಟಿದ್ದಾರೆ, (ಏಜೆನ್ಸೀಸ್).