ವಿಶ್ವದ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಪ್ರದರ್ಶನದಿಂದ ಮಾತ್ರ ಸದಾ ಸುದ್ದಿಯಲ್ಲಿರುತ್ತಾರೆ. ಆದರೆ, ಆಸ್ಟ್ರೇಲಿಯಾದ ಆಲ್-ರೌಂಡರ್ ಮಾರ್ಕಸ್ ಸ್ಟೋನಿಸ್, ವಿಶ್ವಮಟ್ಟದ ಬ್ಯಾಟ್ಸ್‌ಮನ್ ಆಗಿರುವ ಕೊಹ್ಲಿಯನ್ನು ತಮ್ಮ ಬ್ಯಾಕ್‌ಯಾರ್ಡ್ ಕ್ರಿಕೆಟ್ ತಂಡದಲ್ಲಿ ಒಬ್ಬ ಬೌಲರ್ ಆಗಿ ಆಯ್ಕೆ ಮಾಡಿಕೊಳ್ಳುವುದಾಗಿ ಹೇಳಿಕೆ ನೀಡಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಸಾಮಾನ್ಯವಾಗಿ ಕೊಹ್ಲಿ ಅವರ ಬ್ಯಾಟಿಂಗ್ ಬಗ್ಗೆ ಮಾತ್ರ ಮಾತನಾಡುವ ಅಭಿಮಾನಿಗಳ ನಡುವೆ, ಸ್ಟೋನಿಸ್ ಅವರ ಪಾರ್ಟ್‌ಟೈಮ್ ಬೌಲಿಂಗ್ ಹಾಗೂ ವಿಚಿತ್ರ ಬೌಲಿಂಗ್ ಶೈಲಿಯ ಕುರಿತು ನೀಡಿರುವ ಈ ಕಾಮೆಂಟ್‌ಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿವೆ, (ಏಜೆನ್ಸೀಸ್).