ಬಾಂಗ್ಲಾದೇಶದ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಡಿಸೆಂಬರ್ 16ರಂದು ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಕೆಕೆಆರ್ ಫ್ರಾಂಚೈಸಿ ಖರೀದಿ ಮಾಡಿದೆ. ಇದನ್ನು ಉಲ್ಲೇಖಿಸಿ ಆಕ್ರೋಶ ಹೊರಹಾಕಿರುವ ಉತ್ತರ ಪ್ರದೇಶದ ವಿಧಾನಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಸಂಗೀತ್ ಸೋಮ್, ಶಾರುಖ್ ಖಾನ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಅಂತೆಯೇ, ಅನೇಕರು ಕಿಡಿಕಾರಿದ್ದಾರೆ.