ಈ ಮೂರು ಷರತ್ತುಗಳನ್ನು ಪೂರೈಸಿದರೆ, ಫೆಬ್ರವರಿ 15 ರಂದು ಭಾರತ ವಿರುದ್ಧ ಪಂದ್ಯವನ್ನು ಆಡುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಬಹಿರಂಗಪಡಿಸಿದೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ, ಐಸಿಸಿ ಮುಂದೆ ಮೂರು ಷರತ್ತುಗಳನ್ನು ಇಟ್ಟಿರುವ ಪಾಕಿಸ್ತಾನಕ್ಕೆ ಶಾಕ್ ನೀಡಲು ಬಿಸಿಸಿಐ ಸಜ್ಜಾಗಿದೆ. ಪಾಕಿಸ್ತಾನಿ ಆಟಗಾರರೊಂದಿಗೆ ಯಾವುದೇ ಕಾರಣಕ್ಕೂ ಕೈಕುಲುಕುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಅಲ್ಲದೆ, ಪಾಕಿಸ್ತಾನದಂತಹ ಭಯೋತ್ಪಾದಕ ದೇಶದಲ್ಲಿ ತನ್ನ ತಂಡವನ್ನು ಕಳುಹಿಸುವುದಿಲ್ಲ ಎಂದು ಬಿಸಿಸಿಐ ನಿರ್ಧರಿಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ಐಸಿಸಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ, (ಏಜೆನ್ಸೀಸ್).