ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟ್ನಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ ಎನ್ನುವುದು ನಿಜ. ಮೊದಲ ಪಂದ್ಯದಲ್ಲಿ ಕೇವಲ 11 ರನ್ ಗಳಿಸಿದ್ದ ಅವರು, ಕಾರ್ಡಿಫ್ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ 47 ಎಸೆತಗಳಲ್ಲಿ 26 ರನ್ ಗಳಿಸಿ ವಿಲ್ ಜಾಕ್ಸ್ ಬೌಲಿಂಗ್ನಲ್ಲಿ ವಿಕೆಟ್ ಒಪ್ಪಿಸಿದ್ದರು. ಇದರಿಂದಾಗಿ ಅವರ ಫಾರ್ಮ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಆದರೆ, ಬ್ಯಾಟಿಂಗ್ ಕೋಚ್ ಮಾತ್ರ ಇದನ್ನು ಕಳಪೆ ಫಾರ್ಮ್ ಎಂದು ಕರೆಯಲು ಒಪ್ಪುತ್ತಿಲ್ಲ. ಆರಂಭದಲ್ಲಿ ಕೆಲವು ಪಂದ್ಯಗಳಲ್ಲಿ ಬ್ಯಾಟ್ಸ್ಮನ್ಗಳಿಗೆ ಸರಿಯಾದ ರಿದಮ್ ಸಿಗದೇ ಇರಬಹುದು, ಅದನ್ನೇ ಫಾರ್ಮ್ ಔಟ್ ಎನ್ನಲಾಗುವುದಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.