ಆದರೆ, ಟಿ20 ವಿಶ್ವಕಪ್ ಮಧ್ಯದಲ್ಲಿ ಟೀಮ್ ಇಂಡಿಯಾದ 11ರ ಬಳಗದಲ್ಲಿ ಸೇರಿಕೊಂಡ ಸಂಜು, ಯಶಸ್ಸಿನ ಅಲೆಯಲ್ಲೇ ತೇಲಿದರು. ವೆಸ್ಟ್ ಇಂಡೀಸ್ ವಿರುದ್ಧ ನಡೆದ ಸೂಪರ್ 8ರ ನಿರ್ಣಾಯಕ ಪಂದ್ಯದಲ್ಲಿ ಕೊನೆಯವರೆಗೂ ಕ್ರೀಸ್ನಲ್ಲಿ ಗಟ್ಟಿಯಾಗಿ ನಿಂತು, ಅಜೇಯ 97 ರನ್ ಗಳಿಸುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್ಗೆ ಬರಲು ಕಾರಣರಾದರು. ಇದಾದ ಬಳಿಕ ಇಂಗ್ಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲೂ ಅಬ್ಬರಿಸಿ ಬೊಬ್ಬರಿದ ಸಂಜು, 89 ರನ್ ಗಳಿಸಿ, ಟೀಮ್ ಇಂಡಿಯಾ ಬೃಹತ್ ರನ್ ಪೇರಿಸುವಲ್ಲಿ ಅಡಿಪಾಯ ಹಾಕಿದರು. ಬಳಿಕ ನಿನ್ನೆ ನಡೆದ ಫೈನಲ್ ಪಂದ್ಯದಲ್ಲೂ ಕೇವಲ 46 ಎಸೆತಗಳಲ್ಲಿ 5 ಬೌಂಡರಿ ಮತ್ತು 8 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿ, ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆಹಾಕುವಲ್ಲಿ ನೆರವಾದರು.