ಟಿ20 ವಿಶ್ವಕಪ್​ಗೆ ಟೀಮ್​ ಇಂಡಿಯಾ ಪ್ರಕಟ: ಶುಭಮಾನ್​ ಗಿಲ್​ ಔಟ್​, ಇಶಾನ್​ ಕಿಶನ್​ ಇನ್​! T20 World Cup

ಟಿ20 ವಿಶ್ವಕಪ್​ಗೆ ಟೀಮ್​ ಇಂಡಿಯಾ ಪ್ರಕಟ
ಟಿ20 ವಿಶ್ವಕಪ್​ಗೆ ಟೀಮ್​ ಇಂಡಿಯಾ ಪ್ರಕಟ
Published on

ಪ್ರಮುಖ ಮುಖ್ಯಾಂಶಗಳು

  • ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡ ಪ್ರಕಟ
  • ಬ್ಯಾಟಿಂಗ್​ನಲ್ಲಿ ಸತತ ವೈಫಲ್ಯ ಕಾರಣ ಉಪನಾಯಕ ಶುಭಮಾನ್​ ಗಿಲ್​ಗೆ ಇಲ್ಲ ಸ್ಥಾನ
  • ಅನೇಕ ವರ್ಷಗಳ ಬಳಿಕ ಎಡಗೈ ದಾಂಡಿಗ ಇಶಾನ್​ ಕಿಶಾನ್​ ಮತ್ತೆ ತಂಡದಲ್ಲಿ ಸ್ಥಾನ
  • 2026ರ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದೆ ಟಿ20 ವಿಶ್ವಕಪ್​
T20 World Cup : ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಇಂದು (ಡಿ.20) ಭಾರತ ತಂಡವನ್ನು ಪ್ರಕಟಿಸಲಾಗಿದೆ. ಇತ್ತೀಚೆಗೆ ಬ್ಯಾಟಿಂಗ್​ನಲ್ಲಿ ಸತತ ವೈಫಲ್ಯಗಳನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ಉಪನಾಯಕ ಶುಭಮಾನ್​ ಗಿಲ್​ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅಚ್ಚರಿಯ ಸಂಗತಿ ಏನೆಂದರೆ, ಅನೇಕ ವರ್ಷಗಳ ಬಳಿಕ ಎಡಗೈ ದಾಂಡಿಗ ಇಶಾನ್​ ಕಿಶನ್​ ಮತ್ತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅಂದಹಾಗೆ, ಟಿ20 ವಿಶ್ವಕಪ್​ ಮುಂದಿನ ವರ್ಷ ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ನಡೆಯಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಈ ಪಂದ್ಯಾವಳಿಯನ್ನು ಆಯೋಜಿಸುತ್ತಿವೆ. ಈ ಮೆಗಾ ಟೂರ್ನಮೆಂಟ್‌ನಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಬಿಸಿಸಿಐ ಇಂದು ಪ್ರಕಟಿಸಿದೆ. ಆಯ್ಕೆದಾರರು 15 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು, ಸೂರ್ಯಕುಮಾರ್ ಯಾದವ್ ಅವರು ತಮ್ಮ ನಾಯಕತ್ವ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ.

ಟಿ20 ವಿಶ್ವಕಪ್‌ಗಾಗಿನ ಭಾರತ ತಂಡ ಈ ಕೆಳಕಂಡಂತಿದೆ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್ (ಉಪ ನಾಯಕ), ರಿಂಕು ಸಿಂಗ್, ಜಸ್‌ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷ್‌ದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್ ಹಾಗೂ ಇಶಾನ್​ ಕಿಶಾನ್.
ಅಂದಹಾಗೆ, ಶುಭಮಾನ್ ಗಿಲ್ ಅನುಪಸ್ಥಿತಿಯಲ್ಲಿ ಅಭಿಷೇಕ್ ಶರ್ಮ ಮತ್ತು ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ತಿಲಕ್ ವರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾಗಿ ಆಯ್ಕೆಯಾಗಿದ್ದಾರೆ. ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಅವರನ್ನು ಪೇಸ್ ಆಲ್‌ರೌಂಡರ್‌ಗಳಾಗಿ ಆಯ್ಕೆ ಮಾಡಲಾಗಿದ್ದು, ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಅವರನ್ನು ಸ್ಪಿನ್ ಆಲ್‌ರೌಂಡರ್‌ಗಳಾಗಿ ಆಯ್ಕೆ ಮಾಡಲಾಗಿದೆ. ರಿಂಕು ಸಿಂಗ್ ಅವರನ್ನು ಫಿನಿಷರ್ ಆಗಿ ಆಯ್ಕೆ ಮಾಡಲಾಗಿದೆ.
ವೇಗಿಗಳ ವಿಭಾಗದಲ್ಲಿ ಜಸ್​ಪ್ರೀತ್​ ಬುಮ್ರಾ, ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದ್ದು, ಕುಲದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ಅವರನ್ನು ವಿಶೇಷ ಸ್ಪಿನ್ನರ್‌ಗಳಾಗಿ ಹೆಸರಿಸಲಾಗಿದೆ. ಸಂಜು ಸ್ಯಾಮ್ಸನ್ ಬದಲಿಗೆ ಇಶಾನ್ ಕಿಶನ್ ಅವರನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ, (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net