ಮೃತರನ್ನು ಕುಮಾರ್(50), ದೀಪಿಕಾ(42), ಸುನಿಲ್(40) ಯಶೋಧಮ್ಮ(60) , ಪುಟ್ಟಮ್ಮ (55), ಬೆಳ್ಳಿ( 3), ಲೋಲಾಕ್ಷಿ, ಮೀನಾಕ್ಷಿ ಎಂದು ಗುರುತಿಸಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಮ್ಮಿಗನೂರು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.